ಕೋಲಾರ: ಆರೋಗ್ಯ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುತ್ತಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪರಿಣಾಮ ರಾಜ್ಯದಲ್ಲಿಯೇ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನ ಪಡೆದುಕೊಂಡಿವೆ.
ಆಯುಷ್ಮಾನ್ ಭಾರತ್ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ಕೋಲಾರ ಆರೋಗ್ಯ ಇಲಾಖೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಕ್ಟೋಬರ್ 2ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಇಲಾಖೆಯ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯಚಟುವಟಿಕೆಗಳನ್ನ ಆಧರಿಸಿ ಕೋಲಾರಕ್ಕೆ ದ್ವಿತೀಯ ಸ್ಥಾನವನ್ನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಂಜುನಾಥ್ ಅಭಿನಂದಿಸಿದ್ದಾರೆ.