ETV Bharat / state

ಖಾಸಗಿ ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ: ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ - accident in kolara

ಖಾಸಗಿ ಬಸ್ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಟ್ರ್ಯಾಕ್ಟರ್​​ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

bus and Tractor accident in kolara
ಖಾಸಗಿ ಬಸ್ ಟ್ರ್ಯಾಕ್ಟರ್ ನಡುವೆ ಅಪಘಾತ
author img

By

Published : Aug 7, 2022, 1:12 PM IST

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಅರಣ್ಯ ಪ್ರದೇಶದಲ್ಲಿ ಖಾಸಗಿ ಬಸ್- ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಎರಡು ವಾಹನಗಳು ಕರ್ನಾಟಕದಿಂದ ಆಂಧ್ರಪ್ರದೇಶದ ಮದನಪಲ್ಲಿಗೆ ಹೋಗುತ್ತಿದ್ದವು. ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಖಾಸಗಿ ಬಸ್ ಟ್ರ್ಯಾಕ್ಟರ್ ನಡುವೆ ಅಪಘಾತ

ಇದನ್ನೂ ಓದಿ: ಬಳ್ಳಾರಿ: ತಾರಾನಗರ ಜಲಾಶಯದ ಹೊರಹರಿವಿಗೆ ಅಪಾರ ಬೆಳೆ ಹಾನಿ, ರೈತ ಕಂಗಾಲು

ಮೃತ ವ್ಯಕ್ತಿಯನ್ನು ಜಮೀರ್ ಎಂದು ಗುರುತಿಸಲಾಗಿದೆ. ಇವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ಗಾಯಾಳುಗಳನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಿಗದೆ ಗಾಯಾಳುಗಳು ಕೆಲ ಕಾಲ ನರಳುವಂತಾಯಿತು. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.