ಕೋಲಾರ: ಪೌರತ್ವ ತಿದ್ದುಪಡಿ ವಿರೋಧಿಸಿ ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಬಳಿ ಹಿಂದೂ, ಮುಸ್ಲಿಂ,ಕ್ರೈಸ್ತರು ಸಹಭೋಜನ ಕೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಚಾಲನೆ ನೀಡಿದರು. ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರೊಡನೆ ಊಟ ಮಾಡುವುದರ ಮೂಲಕ ಪೌರತ್ವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ರು.
ನಗರದಲ್ಲಿ ಪೌರತ್ವ ವಿರೋಧದ ಕಿಚ್ಚು ಮುಂದುವರೆದ ಭಾಗವಾಗಿ ಸಹಭೋಜನ ಕೂಟವನ್ನ ಹಮ್ಮಿಕೊಳ್ಳಲಾಗಿತ್ತು. ಪೌರತ್ವ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಕೂಡಲೇ ಸಿಎಎ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ರು.