ಕೋಲಾರ: ಗ್ರಾಮ ಪಂಚಾಯತ್ ಪ್ರಭಾರ ಪಿಡಿಓ ಆತ್ನಹತ್ಯೆ ಮಾಡಿಕೊಂಡಿರುವ ಪ್ರಕರಣ ಶ್ರೀನಿವಾಸಪುರ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ರೆಡ್ಡಿ ಆತ್ಮಹತ್ಯೆಗೆ ಶರಣಾದ ಪಿಡಿಓ.
ವಿಶ್ವನಾಥ ರೆಡ್ಡಿ ಮುಳಬಾಗಿಲು ತಾಲೂಕು ಲಕ್ಷ್ಮೀಸಾಗರ ಗ್ರಾಮ ಪಂಚಾಯತ್ನಲ್ಲಿ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ತೋಟದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೌನಿಪಲ್ಲಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಇದನ್ನೂ ಓದಿ: ಇ - ಖಾತೆ ಅಕ್ರಮ ಆರೋಪ : ಪಂಚಾಯತ್ ಪಿಡಿಒ ಆತ್ಮಹತ್ಯೆ)