ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಆರ್. ಮುನಿಆಂಜಿ ಅವರಿಗೆ ಬೆಂಬಲ ನೀಡಬೇಕೆಂದು ಉತ್ತಮ ಪ್ರಜಾಕೀಯ ಸಂಸ್ಥಾಪಕ, ನಟ ಉಪೇಂದ್ರ ಮನವಿ ಮಾಡಿದರು.
ಇಂದು ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಹದಗೆಟ್ಟಿರುವ ವ್ಯವಸ್ಥೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಫರ್ಧಿಸಿದ್ದಾರೆ. ಅಲ್ಲದೆ ನಮ್ಮ ಅಭ್ಯರ್ಥಿಗಳು ಗೆಲ್ಲುವುದಕ್ಕಿಂತ ನಮ್ಮ ವಿಚಾರಗಳನ್ನ ಹೆಚ್ಚು ಹೆಚ್ಚು ಜನರಿಗೆ ತಿಳಿಸುವಂತಹ ಕೆಲಸ ಆಗಬೇಕಿದೆ ಎಂದರು.
ಇನ್ನು ಉತ್ತಮ ಪ್ರಜಾಕೀಯ ಪಕ್ಷದ ಚಿಹ್ನೆ ಆಟೋ ಗುರುತಾಗಿದ್ದು, ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಉಪ್ಪಿ ಕೋರಿದರು.