ಕೋಲಾರ: ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಚಿಂತಾಮಣಿ ರಸ್ತೆಯ ಮದನಹಳ್ಳಿ ಬಳಿ 22 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಡಿಸಿಐಬಿ ಇನ್ಸ್‌ಪೆಕ್ಟರ್ ಗೋವರ್ಧನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕೋಲಾರದ ವಿವಿಧೆಡೆಗೆ ಸಾಗಣೆ ಮಾಡಲು ಸಂಗ್ರಹಿಸಿದ್ದ ಗಾಂಜಾ ವಶಪಡಿಸಿಕೊಂಡು, ಒಂದು ಬೈಕ್ ಮತ್ತು ಆರೋಪಿ ಶಫಿವುಲ್ಲಾ ಎಂಬಾತನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ವಡಗೇರನಹಳ್ಳಿ ಗ್ರಾಮದವನು ಎನ್ನಲಾಗಿದ್ದು, ಈತ ಆಂಧ್ರದಿಂದ ಗಾಂಜಾ ತಂದು ಕೋಲಾರ ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.