ಕೋಲಾರ: ಜಿಲ್ಲಾಧಿಕಾರಿಗಳ ಆದೇಶ ಮೀರಿ ಬಂದ್ಗೆ ಬೆಂಬಲ ಸೂಚಿಸಲು ನಗರಕ್ಕೆ ಬರುತ್ತಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋಲಾರ ಬಂದ್ ಮಾಡಲಾಗಿದೆ. ಬಂದ್ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದ ಹಿನ್ನೆಲೆ ಮುತಾಲಿಕ್ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ನಿಷೇಧ ಹೇರಿ ಆದೇಶ ಹೊರಡಿಸಿದ್ದರು.
ಇದನ್ನು ಓದಿ-ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್ಗೆ ಕರೆ
ಡಿಸಿ ಆದೇಶ ಮೀರಿ ಜಿಲ್ಲೆಯನ್ನು ಪ್ರವೇಶ ಮಾಡಲು ಯತ್ನಿಸಿದ ಪ್ರಮೋದ್ ಮುತಾಲಿಕ್ ಅವರನ್ನು ಗಡಿಭಾಗ ರಾಮಸಂದ್ರದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.