ಕೋಲಾರ: ಜಿಲ್ಲೆಯ ಬಂಗಾರಪೇಟೆ ಠಾಣೆಯಲ್ಲಿ ಕಳೆದ ರಾತ್ರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾತ್ರಿ ಪಾಳಯದ ಕೆಲಸಕ್ಕಾಗಿ ಬಂಗಾರಪೇಟೆ ಪೊಲೀಸ್ ಠಾಣೆಗೆ ಸುರೇಶ್ ಕುಮಾರ್ ಹಾಜರಾಗಿದ್ದರು. ಇಂದು ಬೆಳಗಿನ ಜಾವದ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಬಂಗಾರಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಕೆಜಿಎಫ್ ಎಸ್ಪಿ ಧರಣಿದೇವಿ ಅವರು ಹೆಡ್ ಕಾನ್ಸ್ಟೇಬಲ್ ಸುರೇಶ್ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಬೆಂಗಳೂರು: ವಿವಿಧ ಅಪರಾಧ ಕೃತ್ಯಗಳಲ್ಲಿ 16 ಮಂದಿ ಬಂಧನ, 64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ