ಕೋಲಾರ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿರುವ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗೆ ಇಳಿದಿದ್ದಾರೆ.
ಮೂರು ದಿನಗಳ ಕಠಿಣ ಲಾಕ್ಡೌನ್ನಲ್ಲಿ ತುರ್ತು ವೈದ್ಯಕೀಯ ಸೇವೆಗಳನ್ನ ಹೊರತುಪಡಿಸಿ, ಉಳೆದೆಲ್ಲಾ ಸೇವೆಗಳು ಬಂದ್ ಆಗಿವೆ. ಇನ್ನು ಕಳೆದ ಎರಡು ದಿನಗಳ ಹಿಂದೆಯೇ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದರೂ, ಧಿಕ್ಕರಿಸಿ ರಸ್ತೆಗೆ ಇಳಿದ ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿರುವ ಪೊಲೀಸರು, ಅನವಶ್ಯಕವಾಗಿ ತಿರುಗಾಡುತ್ತಿದ್ದ ಬೈಕ್ಗಳನ್ನ ಸೀಜ್ ಮಾಡಿದ್ದಾರೆ. ಮೆಡಿಕಲ್ ಸ್ಟೋರ್, ಪೆಟ್ರೋಲ್ ಬಂಕ್ ಹಾಗೂ ಹಾಲು ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಕೋಲಾರ ಜಿಲ್ಲೆಯಾದ್ಯಂತ ಸೋಂಕು ಹೆಚ್ಚಾಗುತ್ತಿರುವುದರಿಂದ, ಸೋಂಕು ಹೆಚ್ಚಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ ಸ್ಟ್ರಿಕ್ಟ್ ಲಾಕ್ಡೌನ್ನಲ್ಲಿ ವಾಹನಳನ್ನ ವಶಪಡಿಸಿಕೊಂಡರೆ, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ವಾಹನಗಳಿಗೆ ಬಿಡುಗಡೆ ಭಾಗ್ಯ ಇಲ್ಲ ಎಂದು ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ 8,246 ಕೋವಿಡ್ ಕೇಸ್ ಪತ್ತೆ