ETV Bharat / state

ಕೋಲಾರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್​​​​​: ಎಸ್​ಪಿ

author img

By

Published : Aug 12, 2020, 4:49 PM IST

ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಗಲಭೆ ಹಿನ್ನೆಲೆ ಕೋಲಾರ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ರಾತ್ರಿಯಿಂದಲೇ ನಗರದಲ್ಲಿ ಪೊಲೀಸರಿಂದ ಬೀಟ್ ಮಾಡಿಸಲಾಗಿದೆ ಎಂದು ಎಸ್​ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

KARTIK REDDY
ಎಸ್​ಪಿ ಕಾರ್ತಿಕ್ ರೆಡ್ಡಿ

ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಗಲಭೆ ಹಿನ್ನೆಯಲ್ಲಿ ಕೋಲಾರ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್​ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

ಕೋಲಾರ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ರಾತ್ರಿಯಿಂದಲೇ ನಗರದಲ್ಲಿ ಪೊಲೀಸರಿಂದ ಬೀಟ್ ಮಾಡಿಸಲಾಗಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಹಾಗಾಗಿ ಜಿಲ್ಲೆಯ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಕೋಲಾರ ಎಸ್​ಪಿ ಕಾರ್ತಿಕ್​ ರೆಡ್ಡಿ

ಯಾವುದೇ ಗೊಂದಲ ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಿ. ಅದು ಬಿಟ್ಟು ಯಾರೂ ಸಹ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಮನವಿ ಮಾಡಿದ್ರು. ಗಲಭೆ ಬಳಿಕ ಸಾಕಷ್ಟು ಜನರು ಕೋಲಾರದತ್ತ ಬಂದಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದುವರೆಗೂ ಯಾವುದೇ ಅಂತಹ ವ್ಯಕ್ತಿಗಳು ಕಂಡು ಬಂದಿಲ್ಲ. ಈ ವಿಚಾರವಾಗಿಯೂ ಇಲಾಖೆ ಎಚ್ಚರ ವಹಿಸುವ ಮೂಲಕ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.