ಕೋಲಾರ : ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ,15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ನಡೆದಿದೆ.
ಆಂಧ್ರದ ನಲ್ಲೂರಿನ ವೇಮೂರಿ ಕಾವೇರಿ ಟ್ರಾವೆಲ್ಸ್ಗೆ ಸೇರಿದ ಬಸ್ ಇದಾಗಿದ್ದು, ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಒಟ್ಟು 30 ಜನರಿದ್ದು, ಆಂಧ್ರ ಮೂಲದ ಇಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಭೀಕರ ರೈಲು ಅಪಘಾತ... 53 ಮಂದಿ ಗಾಯ