ETV Bharat / state

ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ - Hasiru sene activists

ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯ ರೈತ‌ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೋಲಾರದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Protest against central government condemning fuel price hike
ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
author img

By

Published : Jan 11, 2021, 5:30 PM IST

ಕೋಲಾರ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರೈತ‌ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೋಲಾರದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕೋಲಾರ ನಗರದ ಗಾಂಧಿ ವನದಿಂದ ಮೆಕ್ಕೆ ವೃತ್ತದವರೆಗೆ ಪ್ರತಿಭಟನಾ ಜಾಥಾ ಮಾಡಿದ ರೈತ ಸಂಘದ ಕಾರ್ಯಕರ್ತರು, ಪೆಟ್ರೋಲ್ ಹಾಗೂ ಡೀಸೆಲ್ ತುಂಬಿದ ಡಬ್ಬಗಳನ್ನು ಕುತ್ತಿಗೆಗೆ ಹಾಕಿಕೊಂಡು ಮೆರವಣಿಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.

ಕೋಲಾರದ ಪ್ರಮುಖ ನಗರಗಳಲ್ಲಿ ಜಾಥಾ ಮಾಡಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿದ್ದು, ಕಾರ್ಪೊರೇಟ್​ಗಳ ಪರವಾಗಿ ಅಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಮೆಕ್ಕೆ ವೃತ್ತದಲ್ಲಿ ಕೇಂದ್ರ ಸರ್ಕಾರದ ಭೂತ ದಹನ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.