ETV Bharat / state

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ; ಗುತ್ತಿಗೆ-ಹೊರಗುತ್ತಿಗೆ ನೌಕರರ ಒತ್ತಾಯ - Leasing and Outsourcing Employees' Union

ಕಳೆದ ಹತ್ತು ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಇದುವರೆಗೂ ಜಿಲ್ಲಾಡಳಿತವಾಗಲಿ, ಸರ್ಕಾರವಾಗಲಿ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಆರೋಪಿಸಿದರು.

Protest by leasing and outsourcing union at kolara
ಗುತ್ತಿಗೆ-ಹೊರಗುತ್ತಿಗೆ ನೌಕರರ ಸಂಘ
author img

By

Published : Oct 3, 2020, 8:27 PM IST

ಕೋಲಾರ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹ

ಕಳೆದ ಹತ್ತು ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಇದುವರೆಗೂ ಜಿಲ್ಲಾಡಳಿತವಾಗಲಿ, ಸರ್ಕಾರವಾಗಲಿ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ನೌಕರರು ಆರೋಪಿಸಿದರು. ಅಲ್ಲದೆ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕೆಲಸದಿಂದ ವಜಾ ಮಾಡಲಾಗುವುದೆಂದು ನೋಟಿಸ್ ನೀಡಿರುವುದು, ಕಷ್ಟಕಾಲದಲ್ಲಿ ಕೊರೊನಾ ವಾರಿಯರ್ಸ್ ಗೆ ತೀರ್ವ ಆಘಾತ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಕೊರೊನಾ ಮಹಾಮಾರಿಯಲ್ಲಿಯೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಕುಟುಂಬವನ್ನು ತ್ಯಜಿಸಿ ಕೆಲಸ‌ ಮಾಡುತ್ತಿದ್ದರೂ ಇದುವರೆಗೂ ಯಾವುದೇ ಸೇವಾ ಭದ್ರತೆಯನ್ನು ಒದಗಿಸಿಲ್ಲ ಎಂದು ಆರೋಪಿಸಿದರು.

ಕಳೆದ ಹತ್ತು- ಹದಿನೈದು ವರ್ಷಗಳಿಂದ ಒಂದೇ ಸಂಬಳದಲ್ಲಿ ಕೆಲಸ ಮಾಡುತ್ತಿದ್ದರೂ ಇದುವರೆಗೂ ನಮ್ಮ ವೇತನವನ್ನು ಹೆಚ್ಚಳ ಮಾಡಿಲ್ಲ. ಈಗಲಾದರೂ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.