ಕೋಲಾರ : ನಗರದಲ್ಲಿ ಬಿಸಿಯೂಟ ನೌಕರರಿಗೆ ಸರ್ಕಾರ ಬಿಡುಗಡೆ ಮಾಡಿರುವ ಮೂರು ತಿಂಗಳ ವೇತನ ಕೂಡಲೇ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಬಿಸಿಯೂಟ ಕಾರ್ಯಕರ್ತರು ಪ್ರತಿಭಟಿಸಿದರು.
ಕೋಲಾರ ತಾಪಂ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸರ್ಕಾರ ಬಿಸಿಯೂಟ ಕಾರ್ಯಕರ್ತರನ್ನು ಕಡೆಗಣಿಸುತ್ತಿದೆ. ನೌಕರರು ಹಾಗೂ ಅವರ ಕುಟುಂಬಸ್ಥರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಹಾಗಾಗಿ, ಕೂಡಲೇ ಸರ್ಕಾರ ಬಿಸಿಯೂಟ ನೌಕರರಿಗೆ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.