ಕೋಲಾರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಇಂದು ಕೋಲಾರದ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನ, ಪದವೀಧರ ಶಿಕ್ಷಕರು ಎಂದು ಪರಿಗಣಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕೆಂದು ಒತ್ತಾಯಿಸಿದರು. ಅಲ್ಲದೆ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಮುಂದುವರಿಸಬೇಕು, ಶಿಕ್ಷಕರ ವರ್ಗಾವಣೆ ಸೇರಿದಂತೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ನೂರಾರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.
ಕೋಲಾರದಲ್ಲಿ ವಿವಿಧ ಸಂಘಟನೆಗಳಿಂದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೈತ ಸಂಘ ಹಾಗೂ ಹಸಿರು ಸೇನೆ, ವಕೀಲರ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಹಲವೆಡೆ ಪ್ರತಿಭಟನೆ ನಡೆಸಿದರು.
ಕೋಲಾರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಇಂದು ಕೋಲಾರದ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನ, ಪದವೀಧರ ಶಿಕ್ಷಕರು ಎಂದು ಪರಿಗಣಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕೆಂದು ಒತ್ತಾಯಿಸಿದರು. ಅಲ್ಲದೆ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಮುಂದುವರಿಸಬೇಕು, ಶಿಕ್ಷಕರ ವರ್ಗಾವಣೆ ಸೇರಿದಂತೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ನೂರಾರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.
ದಿನಾಂಕ - 09-07-19
ಸ್ಲಗ್ - ಟೀಚರ್ಸ್ ಪ್ರೊಟೆಸ್ಟ್
ಫಾರ್ಮೆಟ್ - ಎವಿ
ಆಂಕರ್ : ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಇಂದು ಕೋಲಾರದ ಡಿಡಿಪಿಐ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನ, ಪದವಿಧರ ಶಿಕ್ಷರೆಂದು ಪರಿಗಣಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕೆಂದು ಒತ್ತಾಯಿಸಿದ್ರು. ಅಲ್ಲದೆ ನೂತನ ಪಿಂಚಣಿ ಯೋಜನೆಯನ್ನ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನ ಮುಂದುವರೆಸಬೇಕು, ಶಿಕ್ಷಕರ ವರ್ಗಾವಣೆ ಸೇರಿದಂತೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕೆಂದು ಮನವಿ ಮಾಡಿದ್ರು. ಇನ್ನು ಪ್ರತಿಭಟನೆಯಲ್ಲಿ ನೂರಾರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕರ್ತರು ಭಾಗವಹಿಸಿದ್ರು.
--------
3.ಕೋಲಾರ
ದಿನಾಂಕ - 09-07-19
ಸ್ಲಗ್ - ರೈತ ಸಂಘ ಪ್ರತಿಭಟನೆ
ಫಾರ್ಮೆಟ್ - ಎವಿ
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಯಿಂದಾಗಿ ಬೇಸತ್ತು ಕೋಲಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯ್ತು.ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ರಾಜಕಾರಣಿಗಳ ಪ್ರತಿಕೃತಿ ದಹಿಸಿ ಅಂತ್ಯ ಸಂಸ್ಕಾರದ ಅಣುಕು ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ರು.ಅಧಿಕಾರದ ಆಸೆಯಿಂದ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿ ಕಚ್ಚಾಡುತ್ತಿರುವ ಶಾಸಕರ ಸದಸ್ಯತ್ವವನ್ನು ಕೊಡಲೇ ಅನರ್ಹಗೊಳಿಸಿ,ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಅಂತ ಒತ್ತಾಯಿಸಿದ್ರು.
--
4.ಕೋಲಾರ
ದಿನಾಂಕ -09-07-19
ಸ್ಲಗ್ - ಪ್ರೊಟೆಸ್ಟ್
ಫಾರ್ಮೆಟ್ -ಎವಿ
ಆಂಕರ್: ಹೊಸ ನ್ಯಾಯಾಲಯದ ಕಟ್ಟಡದ ಮಂಜೂರಾತಿಗಾಗಿ ಒತಾಯಿಸಿ ವಕೀಲರ ಸಂಘ ಕೋಲಾರದಲ್ಲಿಂದು ಪ್ರತಿಭಟನೆ ನಡೆಸಿತು. ಕೋಲಾರದ ಜಿಲ್ಲಾ ನ್ಯಾಯಾಲಯದ ಮುಂದೆ ªಪ್ರತಿಭಟನೆ ನಡೆಸಿದ ವಕೀಲರು, ಹೊಸ ನ್ಯಾಯಾಲದ ಕಟ್ಟಡದ ನಿರ್ಮಾಣಕ್ಕಾಗಿ ಹಲವಾರು ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಸಹ ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆ ಎಂದು ವಕೀಲರು ಆರೋಪಿಸಿದ್ರು. ಇನ್ನು ಈಗಿರುವ ನ್ಯಾಯಾಲಯದ ಕಟ್ಟಡದಲ್ಲಿ ಕಲಾಪಗಳಿಗೆ ತುಂಬಾ ತೊಂದರೆಯಾಗುತ್ತಿದೆ, ವಕೀಲರಿಗೆ ಮತ್ತು ಕಕ್ಷಿದಾರರಿಗೆ ಮೂಲಭೂತ ಸೌಕರ್ಯಗಳು ಮತ್ತು ಗಾಳಿ, ಬೆಳಕು ಇಲ್ಲದೆ ಪ್ರತಿ ದಿನ ಪರದಾಡುತ್ತಿದ್ದು, ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸುರಿಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ರು.
-----
5.ಕೋಲಾರ
ದಿನಾಂಕ - 09-07-19
ಸ್ಲಗ್ - ಬಿಜೆಪಿ ಪ್ರೊಟೆಸ್ಟ್
ಫಾರ್ಮೆಟ್ - ಎವಿ
ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಒತ್ತಾಯಿಸಿ ರಸ್ತೆ ತಡೆ ಮಾಡಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಮೈತ್ರಿ ಶಾಸಕರು ರಾಜೀನಾಮೆ ನೀಡಿದ ಬಳಿಕ ಸರ್ಕಾರಕ್ಕೆ ಬಹುಮತವಿಲ್ಲ,ಆದ್ರೆ ಅಧಿಕಾರದ ದುರಾಸೆಯಿಂದ ಸಿಎಂ ಕುಮಾರಸ್ವಾಮಿ ಖುರ್ಚಿಗೆ ಅಂಟಿಕೊಡಿದ್ದಾರೆ. ಈ ಕೂಡಲೇ ಸಿಎಂ ರಾಜೀನಾಮೆ ನೀಡಿ ಬಹುಮತವಿರುವ ಬಿಜೆಪಿಗೆ ಅಧಿಕಾರ ನಡೆಸಲು ಬಿಡಬೇಕು ಅಂತ ಆಗ್ರಹಿಸಿದ್ರು.ಇನ್ನು ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸವಾರರು ಪರದಾಡಬೇಕಾಯ್ತು..Body:..Conclusion:..