ETV Bharat / state

ಭಾರತ್​ ಬಂದ್: ಕೋಲಾರದಲ್ಲಿ ಪರ - ವಿರೋಧ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ನಡೆಯುತ್ತಿರುವ ಬಂದ್​ಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಇದಕ್ಕೆ ವಿರುದ್ಧವಾಗಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟನಾಕಾರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದಲ್ಲಿ ಪರ-ವಿರೋಧ ಪ್ರತಿಭಟನೆ
ಕೋಲಾರದಲ್ಲಿ ಪರ-ವಿರೋಧ ಪ್ರತಿಭಟನೆ
author img

By

Published : Sep 27, 2021, 2:24 PM IST

ಕೋಲಾರ: ಭಾರತ್​ ಬಂದ್ ಹಿನ್ನೆಲೆ ಕೋಲಾರದಲ್ಲಿ ಪರ - ವಿರೋಧದ ಪ್ರತಿಭಟನೆಗಳು ಪ್ರಾರಂಭವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ನಡೆಯುತ್ತಿರುವ ಬಂದ್​ಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಇದಕ್ಕೆ ವಿರುದ್ಧವಾಗಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟನಾಕಾರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನಾಕಾರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು

ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ಜಮಾವಣೆಗೊಂಡಿರುವ ಬಿಜೆಪಿ ಕಾರ್ಯಕರ್ತರು, ಬಸ್ ನಿಲ್ದಾಣದ ಎರಡೂ ದಿಕ್ಕುಗಳಲ್ಲಿ ನಿಂತು ಬಂದ್​ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ, ಸಾರಿಗೆ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಬಂದ್ ಇಲ್ಲ, ಬಂದ್​ಗೆ ಸಹಕರಿಸಬೇಡಿ ಎಂದು ಹೇಳುತ್ತಿದ್ದಾರೆ.

ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ಮನವೊಲಿಸುವ ಯತ್ನ ಮಾಡುತ್ತಿದ್ದಾರೆ. ಇನ್ನು ಅಹಿತಕರ ಘಟನೆಗಳು ನಡೆಯದಂತೆ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜನೆ ಮಾಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.