ಕೋಲಾರ : ಭೂ ಸ್ವಾಧೀನ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವುದರ ಮೂಲಕ ಅನ್ನದಾತರನ್ನ ಶೋಷಣೆ ಮಾಡಲು ಹೊರಟಿದೆ.
ರೈತರ ಬೆಳೆಗಳಿಗೆ ನಿಗದಿತ ಬೆಲೆ ನೀಡುವಂತೆ ಅನೇಕ ಬಾರಿ ಮನವಿ ಸಲ್ಲಿಸಿದ್ರೂ ತಲೆಕೆಡಿಸಿಕೊಳ್ಳದ ಸರ್ಕಾರಗಳು, ರೈತ ವಿರೋಧಿ ಕಾಯ್ದೆ ಜಾರಿ ಮಾಡುವ ಮೂಲಕ ರೈತರ ಗಾಯದ ಮೇಲೆ ಬರೆ ಎಳೆಯಲು ಹೊರಟಿವೆ. ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಭೂ ಸ್ವಾಧೀನ ಕಾಯ್ದೆಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದರು.