ಕೋಲಾರ: ಲಾಕ್ಡೌನ್ ವೇಳೆ ಹಣಕ್ಕಾಗಿ ಜನರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಕೋಲಾರದಲ್ಲಿ ಪಿಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ನರಸಿಂಹಮೂರ್ತಿ ಎಂಬುವರನ್ನ ಅಮಾನತುಗೊಳಿಸಲಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಹಣಕ್ಕಾಗಿ ಜನರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಅವರ ಬೆಂಬಲಿಗರು ರಾಯಲ್ಪಾಡು ಪೊಲೀಸ್ ಠಾಣಾ ಮುಂದೆ ಪ್ರತಿಭಟನೆ ಮಾಡಿದರು. ಅಲ್ಲದೇ ಲಾಕ್ಡೌನ್ ವೇಳೆ ಆಂಧ್ರ ಕರ್ನಾಟಕ ಗಡಿಯ ಚೆಕ್ ಪೋಸ್ಟ್ನಲ್ಲಿ ಹಳ್ಳಿ ಜನಕ್ಕೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.