ETV Bharat / state

ದ್ವಿತೀಯ ಪಿಯುಸಿ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೌಶಿಕ್ ಮನದ ಮಾತು - PUC Toppers impression

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೌಶಿಕ್ ಮನದ ಮಾತು ಇಲ್ಲಿದೆ.

puc result 2023 karnataka
puc result 2023 karnataka
author img

By

Published : Apr 21, 2023, 1:15 PM IST

ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೌಶಿಕ್ ಮನದ ಮಾತು

ಕೋಲಾರ: ಇಂದು ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿ ಎಸ್​ ಎಂ ಕೌಶಿಕ್ ಎಂಬ ವಿದ್ಯಾರ್ಥಿ 600ಕ್ಕೆ 596 ಅಂಕ ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇಂದು ಬಿಡಗಡೆಯಾದ ಫಲಿತಾಂಶದಲ್ಲಿ ಶೇ.74.67ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಶೇ.12.79 ರಷ್ಟು ಹೆಚ್ಚು ಫಲಿತಾಂಶ ಬಂದಿದೆ.

ತಮ್ಮ ಈ ಸಾಧನೆ ಬಗ್ಗೆ ಖುಷಿ ಹಂಚಿಕೊಂಡ ಕೌಶಿಕ್, ಎರಡು ಅಂಕ ಹಿಂದಿಯಲ್ಲಿ ಕಡಿಮೆ ಬಂದಿದೆ, ಎರಡು ಅಂಕ ಇಂಗ್ಲೀಷ್ ಪತ್ರಿಕೆಯಲ್ಲಿ ಕಡಿಮೆ ಬಂದಿದೆ. ಪಿಸಿಎಂಬಿ ನಾಲ್ಕರಲ್ಲಿಯೂ ಔಟ್​ ಆಫ್​ ಔಟ್​ ಬಂದಿದೆ. ನನಗೆ ಒಟ್ಟು 600ಕ್ಕೆ 596 ಅಂಕ ಬಂದಿವೆ. ನಾನು ಇಷ್ಟು ಅಂಕ ತೆಗೆದುಕೊಳ್ಳಲು ಮಖ್ಯ ಕಾರಣ ನನ್ನ ಶಿಕ್ಷಕರು, ಪೋಷಕರು ಹಾಗೂ ನನ್ನ ಸ್ನೇಹಿತರು. ಇವರೆಲ್ಲರ ಬೆಂಬಲ ಮತ್ತು ಪ್ರೋತ್ಸಾಹದಿಂದ ನಾನು ಇಷ್ಟು ಅಂಕ ಗಳಿಸಲು ಸಾಧ್ಯವಾಯಿತು. ಬೆಂಗಳೂರಿನ ಆರ್​ವಿ ಇಂಜಿನಿಯರ್ ಕಾಲೇಜಿನಲ್ಲಿ ಸಿಎಸ್​ ಇಂಜಿನಿಯರ್​ ಮಾಡಬೇಕೆಂಬುವುದು ನನ್ನ ಮುಂದಿನ ಗುರಿಯಾಗಿದೆ. ವಿದ್ಯಾರ್ಥಿಗಳಾದ ನಾವು ನಮಗೋಸ್ಕರ ಅಲ್ಲದಿದ್ದರೂ ತಂದೆ-ತಾಯಿ ಅಥವಾ ಪೋಷಕರಿಗಾಗಿಯಾದರೂ ಚೆನ್ನಾಗಿ ಓದಬೇಕು. ಒಟ್ಟಿನಲ್ಲಿ ಅವರು ಹೆಮ್ಮೆ ಪಡುವಂತಹ ಕೆಲಸ ಮಾಡಬೇಕು ಎಂದು ಸಂತಸ ಹಂಚಿಕೊಂಡರು.

ಎಸ್​ ಎಂ ಕೌಶಿಕ್ ತಂದೆ ಮುರಳಿನಾಥ್ ಅವರು ಕಾಲೇಜಿನ ಪ್ರೆಸಿಡೆಂಟ್ ಆಗಿದ್ದರೆ ತಾಯಿ ಸುಜಾತಾ ಗೃಹಿಣಿಯಾಗಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೌಶಿಕ್ ಅವರಿಗೆ ಕಾಲೇಜಿನ ಸಿಬ್ಬಂದಿ, ಪೋಷಕರು ಹಾಗೂ ಸ್ನೇಹಿತರು ಸಿಹಿ ತಿನ್ನಿಸಿ ಶುಭಾಶಯಗಳನ್ನು ತಿಳಿಸಿದರು. ಕಾಲೇಜಿನ ಮುಂದೆ ಪಟಾಕಿ ಸಿಡಿಸಿ ಖುಷಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಟಾಪರ್ಸ್​!

ಶೇ. 74.67 ರಷ್ಟು ಫಲಿತಾಂಶ: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಅವರು ಫಲಿತಾಂಶ ಪ್ರಕಟಿಸಿದರು. ಬಳಿಕ ಮಾತನಾಡಿದ ರಿತೀಶ್ ಸಿಂಗ್, ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 7,02,067 ವಿದ್ಯಾರ್ಥಿಗಳಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 74.67 ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇ. 61.22, ವಾಣಿಜ್ಯ ವಿಭಾಗದಲ್ಲಿ ಶೇ. 75.89 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿಸಿದ್ದಾರೆ.

3,49,901 ಬಾಲಕರು ಪರೀಕ್ಷೆ ಬರೆದಿದ್ದು ಇದರಲ್ಲಿ 2,41,607 ಬಾಲಕರು ತೇರ್ಗಡೆಯಾಗಿದ್ದಾರೆ. ಶೇ. 69.05 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. 3,52,166 ಬಾಲಕಿಯರು ಪರೀಕ್ಷೆ ಬರೆದಿದ್ದು 2,82,602 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಶೇ. 80.25 ರಷ್ಟು ಫಲಿತಾಂಶ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರದ್ದೇ ಮೇಲುಗೈ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಎನ್ಎಂಕೆಆರ್​ವಿ ಕಾಲೇಜಿನ ವಿದ್ಯಾರ್ಥಿನಿ ತಬಸುಂ ಶೇಖ್ 593 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡರೆ, ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ ಪಿಯು ಕಾಲೇಜಿನ ವಿದ್ಯಾರ್ಥಿನಿ ಅನಾನ್ಯ ಕೆ.ಎ 600ಕ್ಕೆ 600 ಅಂಕ ಪಡೆದುಕೊಂಡು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ... ಈ ವೆಬ್​ಸೈಟ್​ನಲ್ಲಿ ರಿಸಲ್ಟ್ ನೋಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.