ಕೋಲಾರ: ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆ ಜಿಲ್ಲೆಯಲ್ಲಿ ಜರುಗಿದೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯ ದೃಶ್ಯ ಸೆರೆ ಹಿಡಿಯುವಾಗ ಇಬ್ಬರು ಪತ್ರಕರ್ತರ ಮೇಲೆ ರಮೇಶ್ ಕುಮಾರ್ ಕುಮಾರ್ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಭಾವಿ ಸಭೆಯಲ್ಲಿ, ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದವರು ಕಿತ್ತಾಟ ನಡೆಸಿದ್ರು. ಈ ವೇಳೆ, ಕೈ ಕೈ ಮಿಲಾಯಿಸುವ ಹಂತಕ್ಕೆ ಕಾರ್ಯಕರ್ತರು ತಲುಪಿದ್ದು, ಬ್ಯಾನರ್ ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಬೆಂಬಲಿಗರು ಪ್ರಶ್ನೆ ಮಾಡಿದ್ರು.
ಬಳಿಕ ಎರಡು ಬಣದವರ ನಡುವೆ ಮಾತಿಗೆ ಮಾತು ಬೆಳೆದು,ಕಿತ್ತಾಟ ನಡೆಯುತ್ತಿತ್ತು, ಈ ವೇಳೆ ಗಲಾಟೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ ಪರ್ತಕರ್ತರನ್ನ ಕಂಡ ರಮೇಶ್ ಕುಮಾರ್ ಕೋಪಗೊಂಡು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಚೇರಿನಲ್ಲಿ ಕುಳಿತಿದ್ದ ರಮೇಶ್ ಕುಮಾರ್ ಎದ್ದು ಬಂದು ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿ, ಸಭೆಯಿಂದ ಹೊರ ನಡೆದಿದ್ದಾರೆ. ರಮೇಶ್ ಕುಮಾರ್ ನಡೆಯ ವಿರುದ್ಧ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ದ.ಕನ್ನಡದ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದ ಆಂತರಿಕ ಬಿಕ್ಕಟ್ಟಿಗೂ ಸಂಬಂಧ ಇದೆ: ಸಿದ್ದರಾಮಯ್ಯ