ಕೋಲಾರ: ಬಿಟ್ ಕಾಯಿನ್ ಪ್ರಕರಣದಲ್ಲಿ (bitcoin scam)ಯಾರೇ ತಪ್ಪಿತಸ್ಥರಿದ್ರು ಕ್ರಮ ಆಗಲಿ. ನಿಸ್ಪಕ್ಷಪಾತವಾಗಿ ತನಿಖೆ ನಡೆಯಲಿ. ನ್ಯಾಯಾಂಗ ತನಿಖೆಯಾಗಲಿ ಎಂದು ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ (Ramalinga Reddy) ಸರ್ಕಾರಕ್ಕೆ ಒತ್ತಾಯಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ 1971ರ ಬಾಂಗ್ಲಾ ದೇಶ ವಿಮೋಚನಾ ದಿನಾಚರಣೆ ನಿಮಿತ್ತ ಮುಖಂಡರ ಸಭೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಟ್ ಕಾಯಿನ್ ವ್ಯವಹಾರ ತಪ್ಪಲ್ಲ. ಆದರೆ, ಹ್ಯಾಕಿಂಗ್ ಮಾಡಿದವರ ವಿರುದ್ದ ಕ್ರಮ ಕೈಗೊಂಡಿಲ್ಲ ಯಾಕೆ. ಬಿಜೆಪಿ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆಯಿಲ್ಲ ಹಾಗಾಗಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಸಮ್ಮುಖದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದರು.
ಬಿಟ್ ಕಾಯಿನ್ ಪ್ರಕರಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಸ್ಥಾನಕ್ಕೆ ಕುತ್ತು ಬರುತ್ತಾ ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು. ಈಗಾಗಲೇ ಹೈಕಮಾಂಡ್ ಹಂತದಲ್ಲಿ ಜಗದೀಶ್ ಶೆಟ್ಟರ್ ಹಾಗೂ ಅಮಿತ್ ಶಾ ರಾಜ್ಯ ಮುಖಂಡರ ಜೊತೆ ಸಭೆ ಮಾಡಿದ್ದಾರೆ. ಅವರು ನಾಲ್ಕು ಗೋಡೆ ಮಧ್ಯೆ ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.