ಕೋಲಾರ: ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಚೊಕ್ಕದೊಡ್ಡಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಪಾರ್ವತಮ್ಮ (35) ಹಾಗೂ ರೆಡ್ಡಮ್ಮ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ನಾಲ್ವರು ಗಾಯಾಳುಗಳನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಮಿತಿ ಮೀರಿದ ವೇಗವೇ ಕಾರಣವಾಗಿದ್ದು, ವಾಹನ ನಿಯಂತ್ರಣ ಸಿಗದೆ ಪಲ್ಟಿ ಹೊಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.