ETV Bharat / state

ಕೋಲಾರದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

author img

By

Published : Aug 13, 2021, 1:03 PM IST

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ‌.

rape-and-murder-accused-arrested-in-kolara

ಕೋಲಾರ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಆ.3ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಡುಮಾಕನಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಾಲಕಿಯೋರ್ವಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.

ಇದೇ ಗ್ರಾಮದ ಮಂಜುನಾಥ್ ಎಂಬಾತ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರು. ಅಲ್ಲದೆ ದಿನಪೂರ್ತಿ ಮಂಜುನಾಥ್​​ನೊಂದಿಗೆ ಇದ್ದ ಬಾಲಕಿ ಇದ್ದಕ್ಕಿದ್ದಂತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಂಜುನಾಥ್ ಬಾಲಕಿಯನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿತ್ತು.

ಅದರಂತೆ ಘಟನೆ ನಡೆದ ದಿನದಂದೇ ಮಂಜುನಾಥ್ ಪರಾರಿಯಾಗಿದ್ದು, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ‌. ಅಲ್ಲದೆ ಮಾಸ್ತಿ ವೃತ್ತ ನಿರೀಕ್ಷಕರಾದ ವಸಂತ್ ಅವರ ತಂಡ ಯುವಕನ ವಿಚಾರಣೆ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.