ETV Bharat / state

ರಸ್ತೆ ಗುಂಡಿ ಸಮೀಪ ಕುಳಿತು ನಿವೃತ್ತ ಸರ್ಕಾರಿ ನೌಕರನಿಂದ ಏಕಾಂಗಿ ಪ್ರತಿಭಟನೆ

ಕೋಲಾರದ ಗಾಂಧಿನಗರ ಬಳಿ ಹಾಳಾಗಿರುವ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ನಿವೃತ್ತ ಸರ್ಕಾರಿ ನೌಕರರೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು.

Retired govt employee Protest
ರಸ್ತೆ ಗುಂಡಿ ದುರಸ್ತಿಗೆ ಆಗ್ರಹಿಸಿ ನಿವೃತ್ತ ಸರ್ಕಾರಿ ನೌಕರನಿಂದ ಪ್ರತಿಭಟನೆ
author img

By

Published : Sep 9, 2022, 10:33 AM IST

Updated : Sep 9, 2022, 10:44 AM IST

ಕೋಲಾರ: ರಸ್ತೆ ಗುಂಡಿಗಳನ್ನು ದುರಸ್ಥಿ ಮಾಡುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ನಿವೃತ್ತ ಸರ್ಕಾರಿ ನೌಕರರೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆಯಿತು.

ಕೋಲಾರದಿಂದ ಗಾಂಧಿ ನಗರ ಮಾರ್ಗವಾಗಿ ಕೋಲಾರಮ್ಮನ ಕೆರೆ ಕಟ್ಟೆಯ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇದರಿಂದ‌ ಬೇಸತ್ತ ನಿವೃತ್ತ ಸರ್ಕಾರಿ ನೌಕರ ನಾಗರಾಜ್ ಎಂಬುವರು ರಸ್ತೆ ಮಧ್ಯದಲ್ಲಿ ಕುಳಿತು ಏಕಾಂಗಿ ಪ್ರತಿಭಟನೆ ನಡೆಸಿದರು.

ರಸ್ತೆ ಗುಂಡಿ ಸಮೀಪ ಕುಳಿತು ನಿವೃತ್ತ ಸರ್ಕಾರಿ ನೌಕರನಿಂದ ಏಕಾಂಗಿ ಪ್ರತಿಭಟನೆ

ನಿರಂತರ ಮಳೆಯಿಂದ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸದೇ ಇರುವುದಕ್ಕೆ ಈ ರೀತಿಯ ಪ್ರತಿಭಟನೆಗೆ ಮುಂದಾಗಿರುವುದಾಗಿ ಅವರು ಹೇಳಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಮುಗಿಯದ ರಸ್ತೆ ಗುಂಡಿ ಸಮಸ್ಯೆ.. ಹೊಸದಾಗಿ 4545 ರಸ್ತೆ ಗುಂಡಿಗಳು ಪತ್ತೆ

Last Updated : Sep 9, 2022, 10:44 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.