ಕೋಲಾರ: ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಬೇಕಾಗಿ ಹೇಳಿದ್ದರೂ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಟವರ್ ಭಾಗದಲ್ಲಿ ಜಿಲ್ಲಾಡಳಿತದ ಆದೇಶವನ್ನ ಉಲ್ಲಂಘನೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಕೋಲಾರ ನಗರ ಠಾಣಾ ಪೊಲೀಸರು ದಾಳಿ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೀಗ ಹಾಕಿಸಿ, ಆತನನ್ನು ಬಂಧಿಸಿದ್ದಾರೆ. ಸದ್ಯ ಕೋಲಾರ ನಗರ ಠಾಣಾ ಪೊಲೀಸರಿಂದ ಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ.
ಇನ್ನು ನಿನ್ನೆ ಜಿಲ್ಲಾಡಳಿತ ಏಪ್ರಿಲ್ 1 ರವರೆಗೂ ಮಾಂಸ ಅಂಗಡಿ, ಮಧ್ಯೆ ಮಾರಾಟ, ಹೋಟೆಲ್, ಐಸ್ ಕ್ರೀಂ ಪಾರ್ಲರ್, ಪಬ್, ಬಾರ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಿತ್ತು. ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ರಾಜಾರೋಷವಾಗಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ಸದ್ಯ ಪೊಲೀಸರು ತಮ್ಮ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.