ETV Bharat / state

ನರ್ಸಿಂಗ್ ಕಾಲೇಜು ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿಯರಿಂದ ಪೊಲೀಸರಿಗೆ ದೂರು

ಅಂತಿಮ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರು ಶುಲ್ಕದ ವಿಚಾರವಾಗಿ ಮಾತನಾಡಲು ಆಡಳಿತಾಧಿಕಾರಿ ಕೊಠಡಿಗೆ ತೆರಳಿದ್ದಾಗ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ತಾನು ಹೇಳಿದ ಹಾಗೆ ಕೇಳಿದರೆ ಶುಲ್ಕ ಪಾವತಿಸುವಂತಿಲ್ಲ ಎಂದಿದ್ದಾರೆ ಎಂದು ಆರೋಪಿಸಲಾಗಿದೆ.

sexual-harassmentBharat
Etv Bharatನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ
author img

By

Published : Sep 4, 2022, 9:51 AM IST

ಕೋಲಾರ: ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ತಮಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಕೋಲಾರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದಾರೆ. ಇಲ್ಲಿನ ಪ್ರತಿಷ್ಠಿತ ಇಟಿಸಿಎಂ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರಿಗೆ ಆಡಳಿತಾಧಿಕಾರಿಯೇ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಪ್ರಕರಣ ಈ ಮೂಲಕ ಬೆಳಕಿಗೆ ಬಂದಿದೆ.

ಅಂತಿಮ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರು ಶುಲ್ಕದ ವಿಚಾರವಾಗಿ ಮಾತನಾಡಲು ಆಡಳಿತಾಧಿಕಾರಿ ಕೊಠಡಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ಜಾನ್ಸನ್ ಕುಂದಾರ್ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ತಾನು ಹೇಳಿದ ಹಾಗೆ ಕೇಳಿದರೆ ಶುಲ್ಕ ಪಾವತಿಸುವುದು ಬೇಕಿಲ್ಲ ಎಂದು ಹೇಳಿರುವುದಾಗಿ ವಿದ್ಯಾರ್ಥಿನಿಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎಫ್.ಐ.ಆರ್ ದಾಖಲಾಗುತ್ತಿದ್ದಂತೆ ಡಾ.ಜಾನ್ಸನ್ ಕುಂದಾರ್ ತಲೆಮರೆಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಆರ್ಥಿಕ ಅವ್ಯವಹಾರ ಆರೋಪದಡಿ ಜಾನ್ಸನ್ ಆಡಳಿತಾಧಿಕಾರಿ ಹುದ್ದೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಕೋಲಾರ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವೇಶ್ಯಾವಾಟಿಕೆ ದಂಧೆ: ಗ್ರಾಹಕರ ಸೋಗಿನಲ್ಲಿ ಹೋಗಿ ಬಾಲಕಿ ರಕ್ಷಿಸಿದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.