ಕೋಲಾರ : ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಆದ್ರೆ, ಸ್ವಯಂಪ್ರೇರಿತರಾಗಿ ಮತಾಂತರಗೊಂಡರೆ ನಮಗೆ ಅಭ್ಯಂತರವಿಲ್ಲ ಎಂದು ಸರ್ಕಾರದ ಮತಾಂತರ ತಡೆ ಬಿಲ್ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯ ಮಾಲೂರು ತಾಲೂಕಿನ ದೊಡ್ಡಶಿವಾರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಮತಾಂತರ ತಡೆಗೆ ಸರ್ಕಾರ ಬಿಲ್ ಪಾಸ್ ಮಾಡುವ ಕುರಿತು ಪ್ರತಿಕ್ರಿಯೆ ನೀಡಿ, ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಸ್ವಯಂಪ್ರೇರತರಾಗಿ ಮತಾಂತರಗೊಂಡರೆ ನಮ್ಮ ಅಭ್ಯಂತರವಿಲ್ಲ. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡಬಾರದು ಎಂದು ಹೇಳಿದರು.
ನೀರು ಪಾತಾಳಕ್ಕೆ ಕುಸಿದಿದೆ : ಕೆ ಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಈಗಾಗಲೇ ಅಂತರ್ಜಲ ಮಟ್ಟ ಏರಿಕೆ ಆಗಿದೆ. ನೀರು ಪಾತಾಳಕ್ಕೆ ಕುಸಿದಿದ್ದು, 300 ರಿಂದ 500 ಅಡಿಗಳಿಗೆ ಸಿಗ್ತಾ ಇದೆ. ಆದ್ರೆ, ಈಗಿರುವ ಮಣ್ಣಿನ ಮಕ್ಕಳು ಇದನ್ನ ಟೀಕಿಸ್ತಾರೆ.
ಅವರಿಗೆ ತಕ್ಕ ಪಾಠ ಕಲಿಸಿ. ಮುಂದೆ ನಮ್ಮ ಸರ್ಕಾರ ಬಂದೇ ಬರತ್ತೆ, ಆಗ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಕೊಡ್ತೇವೆ, ಬಿಜೆಪಿ ಸರ್ಕಾರದಲ್ಲಿ ಹಣವೇ ಇಲ್ಲ, ನಮ್ಮ ಸರ್ಕಾರದಲ್ಲಿ ಹಣಕ್ಕೆ ಕೊರತೆ ಇರಲಿಲ್ಲ. ನಮ್ಮ ಸರ್ಕಾರ ಇದ್ದಾಗ ಏಳು ಕೆಜಿ ಅಕ್ಕಿ ಕೊಡುತ್ತಿದೆವು ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.