ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದಲ್ಲಿ ಬೆಂಗಳೂರಿನಿಂದ ಬಂದಿದ್ದ ಆರು ಮಂದಿಯನ್ನ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಇದೇ ಜಿಲ್ಲೆಯವರಾದ ಇವರು ಬೆಂಗಳೂರಿನ ಬನಶಂಕರಿಯಲ್ಲಿ ವಾಸವಿದ್ದು, ನಿನ್ನೆ ಕೋಲಾರದ ಬಡಮಾಕನಹಳ್ಳಿ ಸ್ವಗ್ರಾಮಕ್ಕೆ ಆಗಮಿಸಿದ್ರು. ಇನ್ನು ಬೆಂಗಳೂರಿನಲ್ಲಿ ಊಟ, ಕುಡಿಯುವ ನೀರಿಗೆ ಸಮಸ್ಯೆ ಇದ್ದ ಕಾರಣ ಊರಿಗೆ ಬಂದಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಇವರು ಬನಶಂಕರಿ ರೆಡ್ ಝೋನ್ ಪ್ರದೇಶದಿಂದ ಬಂದಿರುವ ಕಾರಣ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಗ್ರಾಮಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಜೊತೆಗೆ ಆರು ಮಂದಿಯ ರಕ್ತದ ಮಾದರಿ ಹಾಗೂ ಗಂಟಲು ದ್ರವ ಪರೀಕ್ಷೆ ನಡೆಸಿರುವ ಅಧಿಕಾರಿಗಳು, ಕುಟುಂಬಸ್ಥರನ್ನ ಹೋಂ ಕ್ವಾರಂಟೈನ್ನಲ್ಲಿ ಇರಿಸಿದ್ದಾರೆ.