ಕೋಲಾರ : ಸಾರಿಗೆ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ತಾಲೂಕಿನ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ.
ಮಾಲೂರಿನಿಂದ ಕೋಲಾರಕ್ಕೆ ಬಸ್ ಬರುತ್ತಿದ್ದಾಗ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೈಕ್‌ನಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಿಂದ ಬಸ್ ಮುಂಭಾಗದ ಗಾಜಿಗೆ ಹಾನಿಯಾಗಿದೆ.
ಓದಿ : ಮುಷ್ಕರಲ್ಲಿದ್ದ ಸಾರಿಗೆ ನೌಕರರಿಗೆ ಶಾಕ್: 96 ತರಬೇತಿನಿರತ ನೌಕರರು ವಜಾ
ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ, ಪೊಲೀಸ್ ಭದ್ರತೆಯಲ್ಲಿ ಕೆಲ ಬಸ್ಗಳು ಓಡಾಡುತ್ತಿವೆ.