ಕೋಲಾರ: ಜಿಲ್ಲೆಯಲ್ಲಿ ನಿನ್ನೆ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಿಂದ ಕೋಟ್ಯಾಂತರ ರೂಪಾಯಿ ಬೆಳೆ ನಷ್ಟವಾಗಿದೆ.
ಬಿರುಗಾಳಿ ಸಹಿತ ಆಲಿಕಲ್ಲು ರಭಸಕ್ಕೆ ತೋಟಗಾರಿಕಾ ಬೆಳೆಗಳು ಮಣ್ಣು ಪಾಲಾಗಿದೆ. ಮಾವಿನ ಬೆಳೆಗೆ ಹಲವೆಡೆ ಡ್ಯಾಮೇಜ್ ಆಗಿದೆ, ಟೊಮೊಟೋ ಬೆಳೆ ನೆಲಕಚ್ಚಿದೆ. ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಬೆಳೆಗಳ ನಷ್ಟವನ್ನು ಪರಿಶೀಲಿಸಲು ಕೃಷಿ ಬೆಲೆ ಆಯೋಗದ ಅಧ್ಯಕ್ಷ ನೇತೃತ್ವದ ತಂಡವು ಡ್ಯಾಮೇಜ್ ಆದ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಅಲ್ಲದೇ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಜೋರಾಗಿ ಬಿದ್ದಿದ್ದು, ಇದ್ರಿಂದ ಜಿಲ್ಲೆಯಾದ್ಯಂತ ಸುಮಾರು 500 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ನೆಲಕಚ್ಚಿದೆ. ಕೋವಿಡ್-19 ರಿಂದ ತತ್ತರಿಸಿರೋ ಅನ್ನದಾತರು ಇದೀಗ ಆಲಿಕಲ್ಲು ಮಳೆಯೂ ಕಂಟಕವಾಗಿ ಪರಿಣಮಿಸಿದೆ.
ಮಳೆಯಿಂದ ಜಿಲ್ಲೆಯಲ್ಲಿ ಟೊಮೊಟೋ, ಕೋಸು, ಕ್ಯಾಪ್ಸಿಕಂ, ಸೌತೆಕಾಯಿ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ಇದ್ರಿಂದ ಅನ್ನದಾತನ ಬದುಕು ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತಾಗಿದೆ.
ಇನ್ನೂ ಮಳೆಯಿಂದ ನಷ್ಟವಾಗಿರುವ ತೋಟಗಳಿಗೆ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ನೇತೃತ್ವದ ನಿಯೋಗವು ನಷ್ಟಕ್ಕೀಡಾಗಿರುವ ತೋಟಗಳಿಗೆ ಭೇಟಿ ನೀಡಿತ್ತು. ಈ ವೇಳೆ ನಾಶವಾಗಿರೋ ಟೊಮೊಟೋ, ಸೌತೆಕಾಯಿ ಹಾಗೂ ಮಾವಿನ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ತಂಡ, ಅನ್ನದಾತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿತು.
ಇದೇ ವೇಳೆ ತೋಟಗಾರಿಕೆ ಇಲಾಖೆ ನಿರ್ದೇಶಕಿ ಗಾಯತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಇದ್ದರು. ರೈತರಿಗೆ ಮಾರುಕಟ್ಟೆ ಸೌಲಭ್ಯ ಸೇರಿದಂತೆ ಕನಿಷ್ಟ ಬೆಂಬಲ ಬೆಲೆ ನೀಡುವಂತೆ ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದ್ರು.