ETV Bharat / state

ಕೋಲಾರ: ಹಾಸ್ಟೆಲ್‌ನಲ್ಲಿ ಚಿತ್ರಾನ್ನ ಸೇವಿಸಿ 34 ವಿದ್ಯಾರ್ಥಿಗಳು ಅಸ್ವಸ್ಥ - ಹಾಸ್ಟೆಲ್​​

ಹಾಸ್ಟೆಲ್​​​ನಲ್ಲಿ ಚಿತ್ರಾನ್ನ ಸೇವಿಸಿದ ಕಾಲೇಜು ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್​​ ಆಗಿರುವ ಘಟನೆ ಕೋಲಾರ ಜಿಲ್ಲೆಯ ದೊಡ್ಡಹಸಾಳ ಬಳಿಯಿರುವ LLB ಕಾಲೇಜು ಹಾಸ್ಟೆಲ್​ನಲ್ಲಿ ನಡೆದಿದೆ.

food poision
ಹಾಸ್ಟೆಲ್ ಊಟ ಸೇವಿಸಿದ 34 ವಿದ್ಯಾರ್ಥಿಗಳು ಅಸ್ವಸ್ಥ
author img

By

Published : Oct 19, 2022, 5:42 PM IST

ಕೋಲಾರ: ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಎಲ್​ಎಲ್​ಬಿ ಹಾಸ್ಟೆಲ್​​ನ 34 ವಿದ್ಯಾರ್ಥಿಗಳು ಫುಡ್​ ಪಾಯಿಸನ್​ ಆಗಿ ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್​ನಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದು, ಈ ಪೈಕಿ 34 ಮಂದಿ ಚಿತ್ರಾನ್ನ ಸೇವಿಸಿದ್ದರು.

ಕೋಲಾರದಲ್ಲಿ ಹಾಸ್ಟೆಲ್ ಊಟ ಸೇವಿಸಿ 34 ವಿದ್ಯಾರ್ಥಿಗಳು ಅಸ್ವಸ್ಥ

ಚಿತ್ರಾನ್ನದಲ್ಲಿ ಹಲ್ಲಿ ಬಿದ್ದಿರುವುದು ಕಂಡು ಬಂದಿದೆ ಎನ್ನಲಾಗ್ತಿದೆ. ಇದನ್ನು ಗಮನಿಸಿದ ಕೆಲವರು ತಿಂಡಿ ತಿನ್ನದೇ, ಈಗಾಗಲೇ ತಿಂದಿದ್ದ ವಿದ್ಯಾರ್ಥಿಗಳಿಗೆ ವಿಷಯ ತಿಳಿಸಿದ್ದಾರೆ. ಅಷ್ಟೊತ್ತಿಗಾಗಲೇ ಪರೀಕ್ಷೆ ಬರೆಯಲು ಹೋಗಿದ್ದ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅನಾರೋಗ್ಯಕ್ಕೀಡಾಗಿದ್ದರು. ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕೆಲವು ಸಂಘಟನೆಗಳ ಮುಖಂಡರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್​ನಲ್ಲಿ ಕೆಲವು ಸಮಸ್ಯೆ, ಗೊಂದಲಗಳಿರುವುದು ಕಂಡು ಬಂದಿದೆ. ಅದನ್ನು ಕೂಡಲೇ ಪರಿಶೀಲನೆ ನಡೆಸಿ ಬಗೆಹರಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕಲ್ಲೇಶ್​ ತಿಳಿಸಿದ್ದಾರೆ.

ಇದನ್ನೂ ಓದಿ: ವಿಷಾಹಾರ ಸೇವಿಸಿ ಇಂದಿರಾಗಾಂಧಿ ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.