ಕೋಲಾರ : ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ.
ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ನಗರದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಂತಾಗಿದೆ. ಏಷ್ಯಾದಲ್ಲಿಯೇ 2ನೇ ಅತಿ ದೊಡ್ಡ ಮಾರುಕಟ್ಟೆ ಎಂಬ ಖ್ಯಾತಿ ಪಡೆದಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿದಿನ ಸಾವಿರಾರು ರೈತರು ಬರ್ತಾರೆ. ಆದರೆ, ಇಲ್ಲಿಗೆ ಬರುವ ಜನ ಕೆಸರಿನಲ್ಲಿಯೇ ನಡೆದಾಡುವಂತಾಗಿದೆ. ಹಾಗಾಗಿ ಸಂಬಂಧಿಸಿದವರು ಕೂಡಲೇ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.