ETV Bharat / state

ನಾನು ಮುಖ್ಯಮಂತ್ರಿಯಾಗಬೇಕೆಂಬ ಮಾತಿಗೆ ಅರ್ಥವಿಲ್ಲ: ಸಚಿವ ಪ್ರಹ್ಲಾದ್​ ಜೋಶಿ

ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬ ಮಾತಿಗೆ ಅರ್ಥವಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ. ಇದೇ ವೇಳೆ ರಾಜ್ಯ ಹಾಗೂ ಕೇಂದ್ರದಲ್ಲಿ ಮೋದಿ ಅವರ ಸರ್ಕಾರ ರೈತರ ಪರವಾಗಿದ್ದು, ರೈತರು ತಾವು ಬೆಳೆದ ಬೆಳೆಯನ್ನ ತಾವೇ ಮಾರಾಟ ಮಾಡಬೇಕೆನ್ನುವ ದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಮಾಡಲಾಗಿದೆ. ಆದ್ರೆ ಈ ಪ್ರತಿಭಟನೆ ಕಾಂಗ್ರೆಸ್​ ಪ್ರಾಯೋಜಿತ ಎಂದು ಜೋಶಿ ಆರೋಪಿಸಿದ್ದಾರೆ.

Minister Prahlad Joshi visits Kurundumale Vinayaka Temple
ಕುರುಡುಮಲೆ ವಿನಾಯಕನ ದೇವಸ್ಥಾನಕ್ಕೆ ಸಚಿವ ಪ್ರಹ್ಲಾದ್​ ಜೋಷಿ ಭೇಟಿ
author img

By

Published : Dec 13, 2020, 5:27 PM IST

ಕೋಲಾರ: ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ನಡೆಯುತ್ತಿದ್ದು, ನಾನು ಮುಖ್ಯಮಂತ್ರಿಯಾಗಬೇಕೆಂಬ ಮಾತಿಗೆ ಅರ್ಥವಿಲ್ಲ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಶಿ ಹೇಳಿಕೆ ನೀಡಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಚಿವ ಪ್ರಹ್ಲಾದ್​ ಜೋಷಿ ಪ್ರತಿಕ್ರಿಯೆ

ಜಿಲ್ಲೆಯ ಮುಳಬಾಗಿಲು ತಾಲೂಕಿನ ಪ್ರಸಿದ್ಧ ಕುರುಡುಮಲೆ ವಿನಾಯಕನ ದೇವಸ್ಥಾನಕ್ಕೆ ಕುಟುಂಬದವರೊಂದಿಗೆ ಭೇಟಿ ನೀಡಿದ ಅವರು, ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಮೋದಿ ಅವರ ಸರ್ಕಾರ ರೈತರ ಪರವಾಗಿದ್ದು, ರೈತರು ತಾವು ಬೆಳೆದ ಬೆಳೆಯನ್ನ ತಾವೇ ಮಾರಾಟ ಮಾಡಬೇಕೆನ್ನುವ ದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಮಾಡಲಾಗಿದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಓದಿ: 'ಸರ್ಕಾರಿ ನೌಕರರನ್ನಾಗಿ ಮಾಡಿದ್ರೆನೇ, ಉಪವಾಸ ನಿಲ್ಲಿಸ್ತೇವೆ, ಬಸ್ ರೋಡಿಗೆ ಇಳಿಸ್ತೇವೆ'

ಸಂಪೂರ್ಣವಾಗಿ ಮಧ್ಯವರ್ತಿಗಳಿಂದ ಮಾರಾಟ ಮಾಡುವುದನ್ನ ದೂರ ಮಾಡಿ, ನೇರವಾಗಿ ಮಾರಾಟ ಮಾಡುವುದಕ್ಕೆ ವ್ಯವಸ್ಥೆ ಮಾಡುವುದಕ್ಕಾಗಿ ಕಾಯ್ದೆ ಜಾರಿ ಮಾಡಲಾಗಿದೆ. ಅಲ್ಲದೆ‌ ಕಾಂಗ್ರೆಸ್​ನ ಕುಮ್ಮಕ್ಕಿನಿಂದ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಮೋದಿ ಸರ್ಕಾರ ಜನಪರವಾದ ಸರ್ಕಾರ ಎಂದು ಸಮರ್ಥಿಸಿಕೊಂಡರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.