ಕೋಲಾರ : ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದ್ದು, ಮಹತ್ವದ ಭೂ ದಾಖಲೆಗಳು ಕಳುವಾಗಿರುವ ಅನುಮಾನವಿದೆ.
ಕಚೇರಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು ದಾಖಲೆಗಳನ್ನು ತಿರುಚಲು ಆಥವಾ ಕದಿಯಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಕೃತ್ಯದ ಹಿಂದೆ ಸಿಬ್ಬಂದಿ ಕೈವಾಡವಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಕಚೇರಿಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸದಿರುವುದರಿಂದ ಖದೀಮರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ.
ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಎಸ್ಪಿ ಜಾಹ್ನವಿ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.