ಕೋಲಾರ: ತಾಲೂಕಿನ ದೇವಾಲಯದ ಬೀಗ ಮುರಿದು ಹುಂಡಿಯ ಹಣ, ಬಂಗಾರದ ನಾಣ್ಯಗಳನ್ನು ಕದ್ದಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಕೆಂಬೋಡಿ ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ದೇವಿಗೆ ಹಾಕಲಾಗಿದ್ದ ಬಂಗಾರ, ಬೆಳ್ಳಿ ನಾಣ್ಯಗಳನ್ನು ಕಳ್ಳರು ದೋಚಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.