ಬಂಗಾರಪೇಟೆ( ಕೋಲಾರ): ಆಟ ಆಡುವ ವೇಳೆ ಮೂವರು ಮಕ್ಕಳು ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೋಲಾರದ ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯದಲ್ಲಿ ನಡೆದಿದೆ.
ಬಾಲಕಿ ಮೋಹಿಕ (8), ಸಾದಿಕ್ (12), ಫಯಾಜ್ (7) ಮೃತರು ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಭಾರಿ ಮಳೆ ಬಂದಿದ್ದು, ರೈಲ್ವೆ ಅಂಡರ್ ಪಾಸ್ನ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿತ್ತು. ಆಟವಾಡುತ್ತಿದ್ದಾಗ ಆಯಾತಪ್ಪಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.