ಕೋಲಾರ: ನಗರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರಿಂದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಚೇರಿ ತೈವಾನ್ ನಿಂದ ಅಧಿಕಾರಿಗಳ ತಂಡ ಆಗಮಿಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ.
ಕಂಪನಿಯ ನಷ್ಟ ಸೇರಿದಂತೆ ದಾಂಧಲೆಗೆ ಕಾರಣ ಏನೆಂಬುದರ ಸಂಪೂರ್ಣ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ ಎನ್ನಲಾಗಿದೆ. ಇನ್ನು ಸುಮಾರು 5 ಜನರ ತಂಡದಿಂದ 6 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದು, ಕಂಪನಿ ಪುನಾರಂಭ ಸೇರಿ, ಹಲವು ಮಹತ್ವದ ಮಾಹಿತಿ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಓದಿ...ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಿಸ್ಟ್ರಾನ್ ಕಂಪನಿ
ಇನ್ನು ಇದೇ ವೇಳೆ, ಕಂಪನಿ ಎದುರು ಪ್ರತಿಭಟನೆಗೆ ಕರೆ ನೀಡಿದ್ದ ಓರ್ವನನ್ನ ಕೋಲಾರ ಪೊಲೀಸರು ಬಂಧಿಸಿದ್ದಾರೆ. ಇನ್ನು ಎಸ್.ಎಫ್.ಐ ಸಂಘಟನೆಯ ಕೋಲಾರ ತಾಲೂಕು ಅಧ್ಯಕ್ಷ ಶ್ರೀಕಾಂತ್ ಬಂಧಿತನಾಗಿದ್ದು, ವೇಮಗಲ್ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.