ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಟೊಮೆಟೊ ತುಂಬಿದ್ದ ಟೆಂಪೋ ಪಲ್ಟಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೆಟೊ ರಸ್ತೆ ಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ಜರುಗಿದ್ದು, ಟೆಂಪೋ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದಾರೆ.
ಹಿಂದೂಪುರದಿಂದ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ತುಂಬಿಕೊಂಡು ಬರುತ್ತಿದ್ದಾಗ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅಪಘಾತದ ರಭಸಕ್ಕೆ ಟೆಂಪೋದಲ್ಲಿ ಇದ್ದ ಟೊಮೆಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಗಾಯಗೊಂಡ ಚಾಲಕ ಹಾಗು ಕ್ಲೀನರ್ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.