ETV Bharat / state

ಮಹಿಳೆಯರು, ಮಕ್ಕಳು, ಗರ್ಭಿಣಿಯರಿಗೆ ಕೊರೊನಾ: ಮಾರ್ಗಸೂಚಿಯಂತೆ ಚಿಕಿತ್ಸೆ

author img

By

Published : Jul 23, 2020, 8:12 PM IST

ಕೋಲಾರ ಜಿಲ್ಲೆಯಲ್ಲಿ ಮೂವರು ಬಾಣಂತಿಯರಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳನ್ನು ಹೆಚ್ಚಿನ ಕಾಳಜಿ ವಹಿಸಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಆರೈಕೆ ಮಾಡಲಾಗುತ್ತಿದೆ.

kolar
ಕೊರೊನಾಗೆ ಸಿಲುಕಿದ ಮಕ್ಕಳು

ಕೋಲಾರ: ಅವು ಈಗಿನ್ನೂ ಹೊಸ ಪ್ರಪಂಚಕ್ಕೆ ಕಾಲಿಟ್ಟಿರುವ ನವಜಾತ ಶಿಶು, ಪುಟ್ಟ ಪುಟ್ಟ ಮಕ್ಕಳು. ಆಡುತ್ತಾ ನಲಿಯುತ್ತಾ ಇರಬೇಕಾದ ಪುಟ್ಟ ಕಂದಮ್ಮಗಳು. ಆದರೆ ಕೊರೊನಾ ಅನ್ನೋ ಮಹಾಮಾರಿ ರುದ್ರ ನರ್ತನಕ್ಕೆ ಇಲ್ಲಿ 15 ಕ್ಕೂ ಹೆಚ್ಚು ಮಕ್ಕಳು ಸಿಲುಕಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಬಾಣಂತಿಯರು ಹಾಗೂ ನವಜಾತ ಮಕ್ಕಳನ್ನು ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಲಾಗುತ್ತಿದೆ.

ಮಹಾಮಾರಿ ಕೊರೊನಾ ವೈರಸ್ ಮಹಿಳೆಯರು, ಮಕ್ಕಳು, ಗರ್ಭಿಣಿಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಗರ್ಭಿಣಿ ಮಹಿಳೆಯರಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿ ಆತಂಕ ಸೃಷ್ಟಿಸುತ್ತಿದ್ದು, ವೈರಸ್ ಈಗ ಬಾಣಂತಿಯರಲ್ಲೂ ಕಾಣಿಸಿಕೊಳ್ಳುವ ಮೂಲಕ ಹುಟ್ಟುತ್ತ ಅಮ್ಮನ ಮಡಿಲಲ್ಲಿ ಮಲಗಿ ಆಡಿಕೊಂಡು, ಎದೆಹಾಲು ಕುಡಿಯಬೇಕಿದ್ದ ಮಕ್ಕಳನ್ನು ದೂರ ಮಾಡಿದೆ.

ಹೌದು.. ಕೋಲಾರ ಜಿಲ್ಲೆಯಲ್ಲಿ ಮೂವರು ಬಾಣಂತಿಯರಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಬಾಣಂತಿಯರು ಹಾಗೂ ಆ ನವಜಾತ ಮಕ್ಕಳನ್ನು ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಲಾಗುತ್ತಿದೆ. ಮಕ್ಕಳಿಗೆ ತಾಯಿ ಎದೆಹಾಲು ಕುಡಿಸುವಾಗ ಮಾತ್ರ ತಾಯಿಯ ಜೊತೆಗೆ ಮಕ್ಕಳನ್ನು ಇರಿಸಲಾಗುತ್ತಿದೆ. ಉಳಿದಂತೆ ಮಕ್ಕಳನ್ನು ಪ್ರತ್ಯೇಕವಾಗಿಟ್ಟು ಆರೈಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.

ಇನ್ನು ಕೋಲಾರದ ಕೋವಿಡ್ ಆಸ್ಪತ್ರೆಯಲ್ಲಿ ಇದುವರೆಗೆ ನಾಲ್ಕು ನವಜಾತ ಶಿಶುಗಳು ಸೇರಿ 19 ಜನ ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕೋಲಾರದ ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಬಾಲಸುಂದರ್ ಹೆಚ್ಚಿನ ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಕ್ಕಳಿಗೆ ಕೊರೊನಾ ಸೋಂಕು ತಗುಲದಂತೆ ಎಚ್ಚರ ವಹಿಸುತ್ತಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೈಕೆ ಮಾಡಲಾಗುತ್ತಿದೆ.

ಇಲ್ಲಿ ಬಹಳಷ್ಟು ಜವಾಬ್ದಾರಿ ಹಾಗೂ ಕಾಳಜಿ ವಹಿಸಿದ್ದು, ಪ್ರತಿನಿತ್ಯ ಆಸ್ಪತ್ರೆಯ ಒಳಗೆ ಹಾಗೂ ಹೊರಗೆ ಸ್ಯಾನಿಟೈಸರ್ ಸಿಂಪಡಿಸಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಒಟ್ಟಿನಲ್ಲಿ ಕೊರೊನಾ ಮಹಾಮಾರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲೂ ಗರ್ಭಿಣಿ ಮಹಿಳೆಯರು, ಬಾಣಂತಿಯರು, ವೃದ್ಧರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಕೊರೊನಾ ಮಹಾಮಾರಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿರೋದಂತು ಸುಳ್ಳಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.