ETV Bharat / state

ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರ ರೋಗಿಗಳಿಗೆ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ - ಜುಲೈ 22 ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ \

ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರ ರೋಗಿಗಳಿಗೆ ಜುಲೈ 22 ಬುಧವಾರದಿಂದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಿರುವ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Kolar
ಜುಲೈ 22 ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ
author img

By

Published : Jul 17, 2020, 8:04 PM IST

ಕೋಲಾರ: ಜುಲೈ 22 ತಾರೀಖಿನಿಂದ ಕೋಲಾರದ ಸರ್ಕಾರಿ ಜಿಲ್ಲಾಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ನಗರದ ಇಟಿಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಕಟ್ಟಡ ಪರಿಶೀಲನೆ ನಡೆಸಿದ್ರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ

ಇದುವರೆಗೆ ಕೋವಿಡ್ ಸೋಂಕಿತರಿಗಾಗಿ ಸುಮಾರು 200 ಹಾಸಿಗೆಗಳನ್ನು ಜಿಲ್ಲಾಸ್ಪತ್ರೆಯಲ್ಲಿ ನಿಗದಿಪಡಿಸಲಾಗಿದೆ. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ.

ಈ ಮೂಲಕ 450 ಹಾಸಿಗೆಗಳಿಗೆ ಹೆಚ್ಚಳ ಮಾಡಿದ್ದು, ಇದುವರೆಗೂ 138 ಕೊರೊನಾ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿದ್ದಾರೆ. ಇವರಲ್ಲಿ ಇಂದು ಸುಮಾರು 52 ಗುಣಮುಖರಾದವರನ್ನು ಬಿಡುಗಡೆ ಮಾಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.