ETV Bharat / state

ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಸಾವು..! - Kolar news

ಕೆಜಿಎಫ್​ ತಾಲೂಕಿನ ಸುಂದರಪಾಳ್ಯ ಹತ್ತಿರದ ತಲ್ಲಪಲ್ಲಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ನಡೆದಿದೆ.

Two young boys death in farm pits
ಮೃತಪಟ್ಟ ಬಾಲಕ ಮಹೇಂದ್ರ ( 17) ಹಾಗೂ ಬದ್ರಿನಾಥ್ (15)
author img

By

Published : May 29, 2020, 6:29 PM IST

ಕೋಲಾರ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಕೆಜಿಎಫ್​ ತಾಲೂಕಿನ ಸುಂದರಪಾಳ್ಯ ಹತ್ತಿರದ ತಲ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಂದ್ರ ( 17) ಹಾಗೂ ಬದ್ರಿನಾಥ್ (15) ಮೃತಪಟ್ಟ ನತದೃಷ್ಟ ಬಾಲಕರು.

ಲಾಕ್​ಡೌನ್​ ಹಿನ್ನೆಲೆ ಶಾಲೆಗಳಿಗೆ ರಜೆ ಇದ್ದುದರಿಂದ ಹಸುಗಳನ್ನು ಮೇಯಿಸಲು ಹೋಗಿದ್ದ ಬಾಲಕರು, ಹಸುಗಳಿಗೆ ನೀರು ಕುಡಿಸಲು ಹೋಗಿ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡಗಳಿಂದಲೇ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬೇತಮಂಗಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.