ETV Bharat / state

ಉಜಿರೆಯ 8 ವರ್ಷದ ಬಾಲಕ ಕಿಡ್ನಾಪ್ ಕೇಸ್ ಸುಖಾಂತ್ಯ​: ಕೋಲಾರದಲ್ಲಿ ಅಪಹರಣಕಾರರ ಬಂಧನ - ಉಜಿರೆ ಬಾಲಕನ ಅಪಹರಣ

ಉಜಿರೆಯ 8 ವರ್ಷದ ಬಾಲಕ ಕಿಡ್ನಾಪ್ ಕೇಸ್ ಸುಖಾಂತ್ಯ

author img

By

Published : Dec 19, 2020, 7:03 AM IST

Updated : Dec 19, 2020, 11:47 AM IST

06:57 December 19

ಮನೆಯೊಂದರಲ್ಲಿ ಮಗುವನ್ನು ಇರಿಸಿದ್ದ ಕಿಡ್ನಾಪರ್ಸ್

ಮಂಗಳೂರು/ಕೋಲಾರ: ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂರ್ನಹೊಸಳ್ಳಿ ಗ್ರಾಮದಲ್ಲಿ ಅಪಹರಣಕಾರರನ್ನು ಬಂಧಿಸಿ, ಬಾಲಕನನ್ನು ರಕ್ಷಿಸಲಾಗಿದೆ. ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ಪೊಲೀಸರು ರಕ್ಷಿಸಿದ್ದಾರೆ. ಇದನ್ನೂ ಓದಿ: ಉಜಿರೆ ಬಾಲಕನ ಅಪಹರಣ ಕೇಸ್; 17 ಕೋಟಿಗೆ ಬೇಡಿಕೆ ಇಟ್ರಾ ಕಿಡ್ನಾಪರ್ಸ್‌?

ಕೋಲಾರ ಎಸ್​​ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿದೆ. ಉಜಿರೆ ರಥಬೀದಿಯಲ್ಲಿ ಆಟವಾಡುತ್ತಿದ್ದ ಬಾಲಕನನ್ನು ಗುರುವಾರ ಸಂಜೆ ಕಿಡ್ನಾಪ್ ಮಾಡಲಾಗಿತ್ತು. ಅಪಹರಣಕಾರರು ಬಳಿಕ ಪೋಷಕರಲ್ಲಿ ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬಾಲಕನ ಅಜ್ಜ ಎ ಕೆ ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಉಜಿರೆಯಲ್ಲಿ ಉದ್ಯಮಿಯೊಬ್ಬರ 8 ವರ್ಷದ ಮಗ ಕಿಡ್ನಾಪ್​!

Last Updated : Dec 19, 2020, 11:47 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.