ಕೋಲಾರ: ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ಸಂಬಂಧಿಸಿದಂತೆ, ಕೆಂಪೇಗೌಡ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮ ಸರ್ಕಾರಿ ಕಾರ್ಯಮವಾಗಿದ್ದು, ಪ್ರೋಟೊ ಕಾಲ್ ಮರೆತು, ಬಿಜೆಪಿಯವರು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸಿದ್ದಾರೆ ಎಂದು ಕೋಲಾರದಲ್ಲಿ ಎಂಎಲ್ಸಿ ಗೋವಿಂದ ರಾಜು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂದು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರು ಮಾತ್ರವಲ್ಲ, ನಾನೂ ಒಬ್ಬ ಎಂಎಲ್ಸಿ ಆಗಿದ್ದು, ನನ್ನನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು, ಹೆಚ್ ಡಿ ದೇವೇಗೌಡ ಅವರು ಮಾಜಿ ಪ್ರಧಾನಿಗಳಾಗಿದ್ದು ಅವರ ಮನೆಗೆ ಹೋಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಬೇಕಾಗಿತ್ತು. ಆದರೆ ಎಲ್ಲರನ್ನು ಕಡೆಗಣಿಸಿ ಕಾರ್ಯಕ್ರಮ ನಡೆಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕೆಂಪೇಗೌಡ ಅವರು ಯಾವುದೋ ಒಂದು ಪಕ್ಷಕ್ಕೆ ಅಥವಾ ಒಂದು ಜಾತಿಗೆ ಸೀಮಿತರಾಗಿಲ್ಲ. ಹೀಗಾಗಿ ಎಲ್ಲಾ ಶಾಸಕರು, ಎಂಎಲ್ಸಿಗಳು ಸೇರಿದಂತೆ ಸಂಬಂಧಪಟ್ಟವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಾಗಿತ್ತು. ಆದರೆ ಅದೆಲ್ಲವನ್ನು ಬಿಟ್ಟು ತರಾತುರಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಹೀಗಾಗಿ ಬಿಜೆಪಿಯ ಈ ಸರ್ವಾಧಿಕಾರಿ ಧೋರಣೆಯನ್ನು ಪಕ್ಷಾತೀತವಾಗಿ ಖಂಡಿಸುತ್ತಿರುವುದಾಗಿ ಹೇಳಿದರು.
ಇದನ್ನೂ ಓದಿ: ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಡಿಡಿ ನಿರ್ಲಕ್ಷ್ಯ ಆರೋಪ: ಹೆಚ್‍ಡಿಕೆ ಗರಂ