ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನು ಸಂಸದ ಎಸ್. ಮುನಿಸ್ವಾಮಿ ಖಂಡಿಸಿದ್ದಾರೆ.
ಇಂದು ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮಗಳೊಂದಿಗೆ ಮಾತನಾಡಿ, ಅಪಹರಣ ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನು ಪತ್ತೆ ಹಚ್ಚಬೇಕು. ಜೊತೆಗೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ ಎಂದರು. ಅಲ್ಲದೇ ಫೋನ್ ಮೂಲಕ ವರ್ತೂರು ಪ್ರಕಾಶ್ ಅವರೊಂದಿಗೆ ಮಾತನಾಡಿ, ಅವರ ಆರೋಗ್ಯದ ಕುರಿತು ವಿಚಾರಿಸಿದ್ದೇನೆ ಎಂದು ತಿಳಿಸಿದರು.