ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಎ.1 ಆರೋಪಿ ಕವಿರಾಜ್ ಎಂಬುವವನನ್ನು ಬಂಧಿಸಲಾಗಿದೆ ಎಂದು ನಗರದಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿಕೆ ನೀಡಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪ್ರಕರಣದ ಎ.1 ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ ಎಂದರು. ಇನ್ನು ಆರೋಪಿ ಕವಿರಾಜ್ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ, 2006 ರಿಂದ ಈಚೆಗೆ ಸುಮಾರು ಹತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವೆಡೆ ರೌಡಿ ಶೀಟರ್ ಆಗಿದ್ದಾನೆ ಎಂದರು. ಇನ್ನು ಎ.1 ಆರೋಪಿಯಿಂದ ಇತರ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಿದ್ದು, ಇನ್ನೆರಡು ದಿನಗಳಲ್ಲಿ ಬಂಧಿಸುವುದಾಗಿ ಹೇಳಿದರು.
ಇದನ್ನೂ ಓದಿ: ಕಿಡ್ನಾಪ್ ಮಾಡಿ, ಮೂರು ದಿನ ಕೂಡಿ ಹಾಕಿದ್ರು: ದೂರು ದಾಖಲಿಸಿದ ವರ್ತೂರ್ ಪ್ರಕಾಶ್
ಇನ್ನು ಮೇಲ್ನೋಟಕ್ಕೆ ಹಣಕ್ಕಾಗಿಯೇ ಮಾಜಿ ಸಚಿವರನ್ನು ಕಿಡ್ನಾಪ್ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಆರೋಪಿಯಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳುವ ಸಲುವಾಗಿ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯನ್ನು ಇಂದು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದರು.
ಓದಿ: ವರ್ತೂರ್ ಪ್ರಕಾಶ್ ಕಿಡ್ನ್ಯಾಪ್ ಪ್ರಕರಣ: ಹಣ ತಂದುಕೊಟ್ಟ ವ್ಯಕ್ತಿಯ ವಿಚಾರಣೆ