ETV Bharat / state

ತಮಿಳು ನಾಮಫಲಕ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ: ವಾಟಾಳ್ ಬಂಧನ - ವಾಟಾಳ್ ನಾಗರಾಜ್ ಬಂಧನ

ತಮಿಳು ಭಾಷೆಯ ನಾಮಫಲಕಗಳನ್ನು ತೆಗೆಯುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರನ್ನ ಪೊಲೀಸರು ಬಂಧಿಸಿದ್ದಾರೆ.

Fighter Vatal Nagaraj Arrested By Police
ವಾಟಾಳ್ ನಾಗರಾಜ್ ಬಂಧನ
author img

By

Published : Jul 22, 2021, 9:39 PM IST

ಕೋಲಾರ: ಕಪ್ಪು ಬಾವುಟ ಪ್ರದರ್ಶಿಸಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಸಂಘಟನೆಯ ವಾಟಾಳ್ ನಾಗರಾಜ್ ಅವರನ್ನ ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಕೆಜಿಎಫ್​​ನಲ್ಲಿ ತಮಿಳು ಭಾಷೆಯ ನಾಮಫಲಕಗಳನ್ನು ತೆಗೆಯುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಛೇರಿ ಎದುರು, ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಯತ್ನ: ವಾಟಾಳ್ ನಾಗರಾಜ್ ಬಂಧನ

ಕೆಜಿಎಫ್ ನಗರದ ಬಸ್ ನಿಲ್ದಾಣದಲ್ಲಿದ್ದ ತಮಿಳು ನಾಮ ನಾಮಫಲಕ್ಕೆ ಮಸಿ ಬಳಿದು, ಕನ್ನಡದಲ್ಲಿ ನಾಮಫಲಕವನ್ನ ಬರೆಯಲಾಗಿತ್ತು. ಇದಾದ ನಂತರ ನಗರಸಭೆಯವರು ತಮಿಳು ನಾಮ ಫಲಕ ಬರೆಯುವುದಕ್ಕೆ ಅನುಮತಿ ನೀಡಿದ್ದು, ತಮಿಳು ಭಾಷೆಗೆ ಒತ್ತು ನೀಡಿದ್ರು. ಇದರಿಂದ ಕೆರಳಿದ ಕನ್ನಡ ಪರ ಸಂಘಟ‌ನೆಗಳು ಕೆಜಿಎಫ್ ನಗರ ಸಭೆಯನ್ನು ಸೂಪರ್ ಸೀಡ್ ಮಾಡುವಂತೆ ವಾಟಳ್ ನಾಗರಾಜ್ ನೇತೃತ್ಬದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರನ್ನ ಪೊಲೀಸರು ಬಂಧಿಸಿದ್ದಾರೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುತ್ತಿದ್ದಂತೆ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.