ಕೋಲಾರ : ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅದ್ದೂರಿಯಾಗಿ ಅಚರಿಸಲಾಯಿತು.
ಕಾರ್ಯಕ್ರಮವನ್ನು ಸಂಸದ ಎಸ್.ಮುನಿಸ್ವಾಮಿ ದೀಪ ಬೆಳಗಿಸುವ ಮೂಲಕ ಉದ್ಟಾಟಿಸಿದ್ರು. ಇದೇ ವೇಳೆ ಮಾತನಾಡಿದ ಅವರು, ನೂತನ ಜಿಲ್ಲಾಧಿಕಾರಿ ಸತ್ಯಭಾಮ ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನತೆ ಸಿಗಬೇಕು. ಮಹಿಳಾ ದಿನಾಚರಣೆಯನ್ನು ಕೇವಲ ಒಂದು ದಿನ ಆಚರಣೆ ಮಾಡದೆ ವರ್ಷದ 365 ದಿನವು ಆಚರಿಸಬೇಕು. ಅಲ್ಲದೆ ಸರ್ಕಾರದ ಯೋಜನೆಗಳನ್ನ ಸರಿಯಾದ ರೀತಿ ಅನುಷ್ಠಾನ ಮಾಡಿ ಜಿಲ್ಲೆಯಾದ್ಯಂತ ಇರುವ ಕೆರೆಗಳನ್ನ ಪುನರುಶ್ಚೇತನಗೊಳಿಸುವುದಾಗಿ ಹೇಳಿದ್ರು.
ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಜಿಲ್ಲಾಡಳಿತದ ವತಿಯಿಂದ ಸೀಮಂತ ಶಾಸ್ರ್ತಮತ್ತು ಉತ್ತಮ ಮಹಿಳಾ ಸ್ತ್ರೀ ಶಕ್ತಿ ಸಂಘಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.