ಕೋಲಾರ: ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಈ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್ ಚಾಲನೆ ನೀಡಿದ್ರು. ಎಸ್ಎಸ್ಎಲ್ಸಿ ಪರೀಕ್ಷೆ ಹತ್ತಿರವಾಗುತ್ತಿರೋ ಹಿನ್ನಲೆಯಲ್ಲಿ ಕಾರ್ಯಾಗಾರವನ್ನ ಆಯೋಜಿಸಲಾಗಿದ್ದು, ಮಕ್ಕಳನ್ನ ಪರೀಕ್ಷೆಗೆ ಶಿಕ್ಷಕರು ಯಾವ ರೀತಿ ಸಿದ್ಧಗೊಳಿಸಬೇಕು ಎಂಬ ಮಾಹಿತಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಟಾಟಾ ಕಂಪನಿಯವರು ಸರ್ಕಾರಿ ಪ್ರೌಢಶಾಲೆಗಳಿಗೆ ಟಾಲಫ್ ಯೋಜನೆಯಡಿ ವಿತರಿಸಿರುವ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಉಪಯೋಗಿಸುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಾಗಾರದಲ್ಲಿ ಪ್ರಭಾರ ಜಿಲ್ಲಾಧಿಕಾರಿ ದರ್ಶನ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.