ETV Bharat / state

ಮುಂದಿನ ಮೂರು ವರ್ಷವೂ ಯಡಿಯೂರಪ್ಪ ಸಿಎಂ ಆಗಿರುತ್ತಾರೆ: ಜಗದೀಶ್ ಶೆಟ್ಟರ್​

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ, ನಾಳೆ‌ ನಡೆಯುವ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ರಾಜ್ಯದಲ್ಲಿ ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷಗಳ ಕಾಲ ಸಿಎಂ ಆಗಿ ಇರಲಿದ್ದಾರೆ. ನಾನು ಮಂತ್ರಿ ಆಗಿ ಕೆಲಸ ಮಾಡುತ್ತೇನೆ ಎಂದು ಸಚಿವ ಜಗದೇಶ್ ಶೆಟ್ಟರ್ ಹೇಳಿದರು.

Yeddyurappa remains 3 years as chief minister: Shetter
'ಇನ್ನೂ 3 ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ' ಶೆಟ್ಟರ್​ ಅಭಯ
author img

By

Published : Jun 5, 2020, 9:53 PM IST

ಕೋಲಾರ: ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷ ರಾಜ್ಯದ‌ ಮುಖ್ಯಮಂತ್ರಿಯಾಗಿ ಇರುತ್ತಾರೆ.‌ ನಾನು ಅವರ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಕೋಲಾರದಲ್ಲಿ ಮಾತನಾಡಿದ ಸಚಿವ ಜಗದೇಶ್ ಶೆಟ್ಟರ್​

ಕೋಲಾರದ ವೇಮಗಲ್ ಹಾಗೂ ನರಸಾಪುರ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ನಾಳೆ‌ ನಡೆಯುವ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿನ ಕೈಗಾರಿಕೆಗಳ ಒತ್ತಡ ಕಡಿಮೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಒಳ್ಳೆಯ ಯೋಜನೆಗಳು ಬರಲಿವೆ. ರಾಜ್ಯಕ್ಕೆ ಕೈಗಾರಿಕೆಗಳನ್ನು ಆಕರ್ಷಿಸಲು ತಕ್ಷಣವೇ ಭೂಮಿ ಹಸ್ತಾಂತರಿಸುವಂತಹ ಕಾಯ್ದೆ ಮಾಡಲಾಗಿದೆ. ಜೊತೆಗೆ ಡೀಮ್ಡ್ ಪರವಾನಿಗೆ ಮೂಲಕ ಮತ್ತಷ್ಟು ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಟಾಸ್ಕ್ ​ಫೋರ್ಸ್ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂಸದ ಎಸ್. ಮುನಿಸ್ವಾಮಿ, ಜಿಲ್ಲಾಧಿಕಾರಿ ಸತ್ಯಭಾಮ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.