ETV Bharat / state

ಬಾವಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು - Markandeeshwara Temple

ಇಲ್ಲಿನ ದೇವಾಲಯ ನಿರ್ಮಾಣ ಕಾರ್ಯಕ್ಕೆ ತಮಿಳುನಾಡಿನಿಂದ ಆಗಮಿಸಿದ್ದ ಯುವಕ ಬಾವಿಯಲ್ಲಿ ಈಜಲು ತೆರಳಿ ಸಾವನಪ್ಪಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಮೃತದೇಹ ಹೊರತೆಗೆದಿದ್ದಾರೆ.

A young man who went out to swim in the well with friends died
ಸ್ನೇಹಿತರ ಜೊತೆ ಬಾವಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು
author img

By

Published : Aug 28, 2020, 6:29 PM IST

ಕೋಲಾರ: ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ನಡೆದಿದೆ. ತಾಲೂಕಿನ ವಕ್ಕಲೇರಿ ಗ್ರಾಮದ ಬಳಿ ಈ ಘಟ‌ನೆ ಜರುಗಿದ್ದು, ತಮಿಳುನಾಡು ಮೂಲದ ಅಜಿತ್ (23) ಮೃತಪಟ್ಟಿದ್ದಾನೆ.

ಈತ ಗಾರೆ ಕೆಲಸ ಮಾಡುತ್ತಿದ್ದು, ಇಲ್ಲಿನ ವಕ್ಕಲೇರಿ ಬಳಿ ಇರುವ ಮಾರ್ಕಂಡೇಶ್ವರ ದೇವಾಲಯದ ಕಾಮಗಾರಿಗೆಂದು ಕೋಲಾರಕ್ಕೆ ಆಗಮಿಸಿದ್ದ. ದೇವಾಲಯದ ದ್ವಾರ ಬಾಗಿಲು ನಿರ್ಮಾಣದ ಕೆಲಸ ಮುಗಿಸಿ ಸ್ನೇಹಿತರೊಂದಿಗೆ ಬಾವಿಯೊಂದರಲ್ಲಿ ಈಜಲು ತೆರಳಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕದಳ ಸಿಬ್ಬಂದಿ ಮೃತ ದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೋಲಾರ‌ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.